ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿರುವ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜಿಸಬಾರದೇಕೆ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನರ ಆಶಯಗಳಿಗೆ ಪೂರಕವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸತ್ಯಾಂಶವನ್ನು ಭಾರತೀಯ ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕೂಡಾ ಒಪ್ಪಿಕೊಂಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ, ಹೆಸರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ.

ಸಚಿವರ ನಿಷ್ಕ್ರಿಯತೆಯನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ ಮಾಡಲು ಮುಂದಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವರು, ಕಾಂಗ್ರೆಸ್‌ ಶಾಸಕರಲ್ಲೇ ಅಸಮಾಧಾನವಿದೆ ಎಂದು ಬಿಜೆಪಿ ದೂರಿದೆ.

- Advertisement - 

ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಇಷ್ಟೆಲ್ಲಾ ಅಸಮಾಧಾನ, ನಿಷ್ಕ್ರಿಯತೆ ಹೊಂದಿರುವ, ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ದೂಡಿರುವ ಈ ಸರ್ಕಾರವನ್ನು ವಿಸರ್ಜಿಸಬಾರದೇಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

 

- Advertisement - 

Share This Article
error: Content is protected !!
";