ಹಿಂದೂ ಸಂಘಟನೆಯ ನಾಯಕರು, ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು ಖಂಡನೀಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಸ್ಲಿಂ ಸಮುದಾಯದ ಒಲೈಕೆಗಾಗಿ ಕರಾವಳಿ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಬಿಜೆಪಿ ತಿಳಿಸಿದೆ.

ಕಾಂಗ್ರೆಸ್‌ ಸರ್ಕಾರ ಹಿಂದೂ ಕಾರ್ಯಕರ್ತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ಹಿಂದೂ ಸಂಘಟನೆಯ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ವಿನಾಃ ಕಾರಣ ಕೇಸ್ ದಾಖಲಿಸುತ್ತಿದೆ.

- Advertisement - 

ನಿಯಮಗಳನ್ನು ಮೀರಿ ರಾತ್ರಿ ವೇಳೆ ಹಿಂದೂ ಕಾರ್ಯಕರ್ತರ ಮನೆ ಬಾಗಿಲು ಬಡಿದು ವಿಚಾರಣೆ ನಡೆಸುತ್ತಿದ್ದಾರೆ‌. ಪಶ್ಚಿಮ ಬಂಗಾಳದ ರಾಜಕೀಯವನ್ನು ಕರ್ನಾಟಕದಲ್ಲಿ ನಡೆಸಲು ಹೊರಟರೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಯಲ್ಲಿ  ಕಾರ್ಯಕರ್ತರೊಂದಿಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚಿಸಿದೆ.

 

- Advertisement - 

Share This Article
error: Content is protected !!
";