ಜ್ಞಾನ ಗಂಗೋತ್ರಿಯಲ್ಲಿ ಪರಿಸರ ದಿನ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಪರಿಸರ ದಿನ ಆಚರಿಸಲಾಯಿತು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  
ಸಂಪನ್ಮೂಲ ವ್ಯಕ್ತಿ ಡಾ. ಸಿ.ಹಾಲೇಶಿ ವಿಶೇಷ ಉಪನ್ಯಾಸ ನೀಡಿದರು. ವಿಭಾಗದ ಸಂಯೋಜನಾಧಿಕಾರಿ ಡಾ.ಕೀರ್ತಿಕುಮಾರ್ ಅಧ್ಯಕ್ಷತೆ ವಹಿಸಿದರು.

- Advertisement - 

ಈ ಸಂದರ್ಭದಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜೇಂದ್ರ ಪ್ರಸಾದ್ ಹಾಗೂ ಸಸ್ಯಶಾಸ್ತ್ರ ವಿಭಾಗದ ಸಂಯೋಜಕಿ ಬಿ.ಟಿ. ನಿವೇದಿತ ಹಾಜರಿದ್ದರು. ಪ್ರಾಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಸಸಿ ನೆಟ್ಟರು.

 

- Advertisement - 

 

Share This Article
error: Content is protected !!
";