ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ವತಿಯಿಂದ ಇತ್ತೀಚೆಗೆ ನಮ್ಮನ್ನು ಅಗಲಿದ ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್.ಜಾರ್ಜ್ ಮತ್ತು ಅ.ಚ.ಶಿವಣ್ಣ ಅವರುಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಡಿ.5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಕೆ.ಜಿ.ರಸ್ತೆ, ಕಂದಾಯ ಭವನದಲ್ಲಿರುವ ಕೆಯುಡಬ್ಲೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರಾದ ಹುಣಸವಾಡಿ ರಾಜನ್ ಅವರುಗಳು ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುವರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ರಾಜ್ಯ ಪದಾಧಿಕಾರಿಗಳು, ವೃತ್ತಿ ಬಾಂಧವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

