ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Exploring Nature’s Pharmacy: Potential of Medicinal and Aromatic Plants and Their Conservation” ವಿಷಯದ ಮೇಲೆ 2025 ಜನವರಿ 7 ರಿಂದ 9 ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.
ಈ ಸಮ್ಮೇಳನದಲ್ಲಿ ಔಷಧೀಯ ಮತ್ತು ಸುಗಂಧ ಸಸ್ಯಗಳ ಕುರಿತ ಪ್ರದರ್ಶನದ ಮಳಿಗೆಯನ್ನು 10 X 10 ಅಡಿ ವಿಸ್ತೀರ್ಣ ಹಾಕಲು ಅವಕಾಶ ಕಲ್ಪಿಸಲಾಗಿದೆ. ಸದರಿ ಸಮ್ಮೇಳನದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ಪ್ರತಿನಿಧಿಗಳು ಭಾಗವಹಿಸಿರುವುದರಿಂದ ಔಷಧೀಯ ಮತ್ತು ಸುಗಂಧ ಸಸ್ಯ ಆಧಾರಿತ ಉತ್ಪನ್ನಗಳಿಗೆ ಹೆಚ್ಚಿನ ಪ್ರಚಾರ ದೊರಯಲಿದೆ.
ಪ್ರದರ್ಶನದ ಮಳಿಗೆಯನ್ನು ಹಾಕಲು ಇಚ್ಛಿಸುವ ಆಸಕ್ತ ಕಂಪೆನಿಗಳು ಮತ್ತು ಉದ್ಯಮದಾರರು ಡಿಸೆಂಬರ್ 31 ರೊಳಗಾಗಿ ಅಕಾಡೆಮಿಯ ಅಧಿಕಾರಿಗಳ ಮೊ.ಸಂ. 9880405181, 9743084194 ಮತ್ತು 9845258894 ಅಥವಾ ಅಕಾಡೆಮಿಯ ವೆಬ್ಸೈಟ್ http://kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ. ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.