ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ.ಸರೋಜಾದೇವಿ ಅವರು ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದವರು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.
ಇಡೀ ದಕ್ಷಿಣ ಭಾರತಕ್ಕೆ ದೊಡ್ಡ ಗೌರವ ತಂದುಕೊಟ್ಟವರು. ನನಗೆ ಆತ್ಮೀಯರಾಗಿದ್ದರು. ರಾಜಕುಮಾರ್ ಹಾಗೂ ಇತರೇ ನಾಯಕ ನಟರ ಜೊತೆ ಅಭಿನಯಿಸಿದ್ದನ್ನು ನೋಡಿದ್ದೇನೆ.
ಇವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಡಿಸಿಎಂ ಶಿವಕುಮಾರ್ ಪ್ರಾರ್ಥಿಸಿದ್ದಾರೆ.