ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತ ಅದೆಷ್ಟು ಮಿತಿ ಮೀರಿದೆ ಎಂದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್, ಫಿವರ್‌ಟ್ಯಾಬ್ಲೆಟ್‌ಗಳು ಕೂಡ ಸಿಗುತ್ತಿಲ್ಲ.
ಇನ್ನೊಂದೆಡೆ ಬಳ್ಳಾರಿಯಲ್ಲಿ ಬಾಣಂತಿಯರ ಸಾವುಗಳು ಕೂಡ ನಿಲ್ಲುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರು, ಬಾಣಂತಿಯರನ್ನು ಬಲಿ ಪಡೆಯುತ್ತಿರುವ ಆರೋಗ್ಯ ಇಲಾಖೆ ಇದೀಗ ಶಿಶುಗಳನ್ನು ಕೂಡ ಬಲಿ ಪಡೆಯುತ್ತಿದೆ.
ಆರೋಗ್ಯ ಇಲಾಖೆಯನ್ನು ಅನಾರೋಗ್ಯ ಇಲಾಖೆಯನ್ನಾಗಿ ಪರಿವರ್ತನೆ ಮಾಡಿದ ಕೀರ್ತಿಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ಇನ್ನೂ ಅದ್ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಕುಳಿತಿದ್ದೀರಿ? ಮೊದಲು ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಬಿಜೆಪಿ ಆಗ್ರಹ ಮಾಡಿದೆ.