ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರ ಹೇಳಿಕೆಯ ವಿಡಿಯೋಗಳನ್ನು ನಾನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವರನ್ನು ಗಮನಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅವರ ಬಯಲ್ಲೇ ಅನೇಕ ವಿಚಾರಗಳು ಬಂದಿವೆ. ತಮ್ಮ ವಿಚಾರಗಳನ್ನು ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದಾಗಿ ಹೇಳಿದ್ದಾರೆ.
ಅದನ್ನೇ ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆ ದಾಖಲೆಗಳನ್ನು ಅವರೇ ಬಿಡುಗಡೆ ಮಾಡಲಿ. ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದಾಗಿ ಯೂಟರ್ನ್ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.