ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೪-೨೫ನೇ ಸಾಲಿನ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಿದೆ.

        ಜಿಲ್ಲೆಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು

ಜನವರಿ ೨೪ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಯಾತ್ಸಂದ್ರ, ಮೈದಾಳ ರಸ್ತೆ, ಬಸವಪಟ್ಟಣ, ತುಮಕೂರು-೫೭೨೧೦೪ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.೦೮೧೬-೨೨೭೮೦೧೪ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

 

 

- Advertisement -  - Advertisement -  - Advertisement - 
Share This Article
error: Content is protected !!
";