ಕೃಷಿ ಪಂಡಿತ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್ಐಡಿFruits Identification ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login  ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ / ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿಯ ಅಪರ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  

- Advertisement -  - Advertisement - 
Share This Article
error: Content is protected !!
";