ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ನಡೆಸಲಾಗುತ್ತಿರುವ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿರುವ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಉಳಿದಿರುವ 7,8 ಹಾಗೂ 9 ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆ ನಡೆಯಲಿದೆ.  ಜುಲೈ 18 ರಂದು ಬೆಳಿಗ್ಗೆ 10:30 ರಿಂದ 1 ಗಂಟೆವರೆಗೆ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,

- Advertisement - 

ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಆದರ್ಶ ಶಾಲಾ ಶಿಕ್ಷಕರಿಗೆ ಜುಲೈ 10ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಎರಡು ತಾಲೂಕುಗಳ ಸ್ಥಳೀಯ ಖಾಯಾಂ ನಿವಾಸಿಗಳ ಮಕ್ಕಳು ಬೇರೆ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ ಮೂಲ ತಾಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಚಿಸಿದ್ದಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ, ಬಿ../ಬಿ.ಆರ್.ಸಿ(ಆಡಳಿತ/ಅಭಿವೃದ್ಧಿ) ಹಾಗೂ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಿಗೆ ಸಂಪರ್ಕಿಸಬಹುದು ಡಯಟ್ ಪ್ರಾಚಾರ್ಯ ನಾಸಿರುದ್ದಿನ್ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";