13 ಸಾವಿರ ಯುವತಿಯರ ನಗ್ನ ಪೋಟೋ, ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕಾಮುಕನೊಬ್ಬ ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ
, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕ್ರಿಮಿಯನ್ನು ಕೊನೆಗೂ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

- Advertisement - 

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವ ವ್ಯಕ್ತಿ ತಾನು ಸೃಜಿಸುತ್ತಿದ್ದ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ ಆರೋಪ ಇದೆ.
ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು
ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement - 

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೋಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ ಕೃತ್ಯಗಳು ಬಯಲಿಗೆ ಬಂದಿವೆ.

- Advertisement - 

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ.

ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

 

Share This Article
error: Content is protected !!
";