ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಸಮಸ್ಯೆಗಳ ಪರಿಹಾರಕ್ಕೆ ಬದ್ಧ! ಎಂದು ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು ವ್ಯಾಪ್ತಿಯ ಸಚಿವರುಗಳು ಹಾಗೂ ಶಾಸಕರುಗಳ ಜೊತೆ ಕುಮಾರಪಾರ್ಕ್ ಸರಕಾರಿ ನಿವಾಸದಲ್ಲಿ ಸಭೆ ನಡೆಸಿ ಅವರು ಮಾತನಾಡಿದರು.
ಬೆಂಗಳೂರಿನ ಅಭಿವೃದ್ಧಿ, ಇಲ್ಲಿನ ಸ್ಥಳೀಯ ಸಮಸ್ಯೆಗಳು ಮತ್ತು ಅವುಗಳ ನಿವಾರಣೆ, ಹೊಸ ಯೋಜನೆಗಳಾದ ನಂಬಿಕೆ ನಕ್ಷೆ, ಖಾತಾ ವಿತರಣೆ, ಹಸಿರು ಬೆಂಗಳೂರು ಮತ್ತಿತರ ವಿಚಾರಗಳ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.