ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಆಗುತ್ತದೆ. ಮಳೆಗಾಲ ಬಂದಾಗ ಮುನ್ನೆಚ್ಚರಿಕೆ ಯಿಂದ ಬಿಬಿಎಂಪಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ತಗ್ಗು ಪ್ರದೇಶಗಳಲ್ಲಿ ಕಾಮಗಾರಿ ಹಮ್ಮಿಕೊಂಡರೆ ಏನಾಗುತ್ತದೆ ಎಂದು ಸಚಿವ ಜಿ. ಪರಮೇಶ್ವರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಬೆಂಗಳೂರು ಮಳೆ ಅವಾಂತರದ ಕುರಿತು ಪ್ರತಿಕ್ರಿಯಿಸಿದ ಅವರು, ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿ ಕಾಮಗಾರಿ ಹಮ್ಮಿಕೊಂಡರೆ ಏನಾಗುತ್ತದೆ?. ಇದರ ಅನುಭವ ಅಧಿಕಾರಿಗಳಿಗೆ ಇರಬೇಕು. ಬಿಬಿಎಂಪಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ವೈಟ್ ಟಾಪಿಂಗ್, ಕೇಬಲ್ ವೈರ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಮಳೆಗಾಲದಲ್ಲಿ ಜಾಗ್ರತೆ ವಹಿಸಬೇಕಿತ್ತು ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ ಬೇಸರ ವ್ಯಕ್ತಪಡಿಸಿದರು.
ಮಳೆಯಿಂದ ತುಂಬಾ ತೊಂದರೆಯಾಗಿದೆ. ಸಿಲ್ಕ್ ಬೋರ್ಡ್ನಲ್ಲಿ ನೀರು ನುಗ್ಗಿದೆ. ಬೇರೆ ಕಡೆಗಳಲ್ಲೂ ನೀರು ನುಗ್ಗಿದೆ. ಇದರಿಂದ ಟ್ರಾಫಿಕ್ಗೆ ತೊಂದರೆ ಅಂತಿದ್ದಾರೆ. ಡಿಸಿಎಂ ಡಿಕೆಶಿ ಹೊಸಪೇಟೆಯಲ್ಲಿದ್ದಾರೆ. ಅವರು ಸೂಚನೆ ಕೊಟ್ಟಿದ್ದಾರೆ ಅಂತ ಕೇಳಿದ್ದೇನೆ. ವಲಯವಾರು ಜಂಟಿ ಆಯುಕ್ತರು ಇರುತ್ತಾರೆ. ಅವರು ಕ್ರಮ ವಹಿಸುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.