ಭಾರತೀಯತೆಯ ಬೆಸುಗೆಗೆ ಬೂಕರ್ ಮನ್ನಣೆ: ಭಾನು ಮುಷ್ತಾಕ್ ನಮ್ಮ ನೆಲದ ಹೆಮ್ಮೆ: ಕೆ.ವಿ.ಪ್ರಭಾಕರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ
, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.

- Advertisement - 

ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು ಜಾತ್ಯತೀತತೆಯನ್ನು ಬೆಸೆಯುವ ಕಾರ್ಯ ಮಾಡುತ್ತಲೇ ಬರುತ್ತಿದ್ದಾರೆ. ಇವರಿಗೆ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಮತ್ತು ಕನ್ನಡತನದ ಹಿರಿಮೆಯನ್ನು ಹೆಚ್ಚಿಸಿದ್ದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡಬೇಕಾದ ಸಂದರ್ಭ ಇದಾಗಿದೆ.

- Advertisement - 

 ವಿಶ್ವ ಮಾನವತೆಯ ಸದಾಶಯವನ್ನು ಎತ್ತಿ ಹಿಡಿಯುವ ಭಾನು ಮುಷ್ತಾಕ್ ಅವರ ಕತೆಗಳು ವಿಶ್ವದ ಎಲ್ಲಾ ಭಾಷೆಗಳಿಗೂ ಅನುವಾದಗೊಳ್ಳಬೇಕು ಎನ್ನುವುದು ನನ್ನ ಆಶಯ.

ಭಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕೃತೆಗಳು ನನಗೆ ಬಹಳ ಇಷ್ಟವಾದ ಸಂಕಲನ. ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಪ್ರಭಾಕರ್ ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";