ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಕೆಡಿಪಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಶಾಲಾ ಕಾಲೇಜು ಮಕ್ಕಳ ಕೈಗಳಿಗೆ ಗಾಂಜಾ ಅಥವಾ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ.
ಸಣ್ಣ ಸಣ್ಣ ಮಕ್ಕಳು ಇಂತಹ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯದ ಸಮಾಜದ ಗತಿ ಏನು. ಅಬಕಾರ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಸಮನ್ವಯ ಮಾಡಿಕೊಂಡು, ಇದಕ್ಕೆ ಕಡಿವಾಣ ಹಾಕಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣಗಳು ಕಂಡುಬಂದರೂ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ ಪ್ರತಿಕ್ರಿಯಿಸಿ, ಶಾಲಾ ಶಿಕ್ಷಕರುಗಳು ಈ ಬಗ್ಗೆ ಸಾಕಷ್ಟು ನಿಗಾ ವಹಿಸಬೇಕು.
ಮಕ್ಕಳ ನಡವಳಿಕೆ ಬದಲಾವಣೆ ಬಗ್ಗೆ ಗಮನಿಸುತ್ತಿರಬೇಕು. ಯಾವುದೇ ಅನುಮಾನ ಕಂಡುಬಂದರೂ, ಪ್ರಾಥಮಿಕ ಪರಿಶೀಲನೆ ನಡೆಸಿ, ಖಚಿತಪಟ್ಟಲ್ಲಿ, ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.