ಹಿತ ರಕ್ಷಣಾ ಸಮಿತಿಯಿಂದ ರಾಜ್ಯೋತ್ಸವ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ
69 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

- Advertisement - 

 ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ನವೆಂಬರ್ 1, 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಆ ಸುದಿನದ ನೆನಪಿಗಾಗಿ  ಕನ್ನಡ ರಾಜ್ಯೋತ್ಸವವನ್ನು  ಆಚರಿಸಲಾಗುತ್ತದೆ. ಈ ಆಚರಣೆಯ ಮೂಲಕ ಇಂದಿನ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

- Advertisement - 

 ನಿಕಟ ಪೂರ್ವ ಜಿಲ್ಲಾ ಪಂಚಾಯಿತಿ   ಸದಸ್ಯ  ಅರವಿಂದ್ ಮಾತನಾಡಿ, ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಆರಾಧನೆಯ ನವೆಂಬರ್ ತಿಂಗಳಲ್ಲಿ ಮಾತ್ರ ಸೀಮಿತವಾಗದೆ ಪ್ರತಿದಿನ ನಿತ್ಯೋತ್ಸವವಾಗಬೇಕು ಎಂದರು.

 ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್   ಮುಖಂಡರಾದ ರಾಮಕೃಷ್ಣ, ವೆಂಕಟಪ್ಪ, ಜಯಣ್ಣ, ಕಿಟ್ಟಿ ಯುವ ಮುಖಂಡ ಉದಯ ಆರಾಧ್ಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

- Advertisement - 

 

Share This Article
error: Content is protected !!
";