ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸುವ ನಿಟ್ಟಿನಲ್ಲಿ ಇಂದು ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಪರಿಶೀಲನೆ ಮಾಡಲಾಯಿತು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ, ಹಮ್ಮಿಕೊಳ್ಳಲುದ್ದೇಶಿಸಿರುವ ಶತಮಾನೋತ್ಸವ ಕಾರ್ಯಕ್ರಮದ ಸಂಬಂಧ ಇಂದು ಬೆಳಗಾವಿಯ ವೀರ ಸೌಧ ಉದ್ಯಾನ, ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಗ್ರೆಸ್‌ಬಾವಿ ಹಾಗೂ ಸಂಬಂಧಪಟ್ಟ ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ ಅವರು ತಿಳಿಸಿದ್ದಾರೆ.