ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚಕ್ಕೆರೆ ಗ್ರಾಮದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ,
ಮಾಜಿ ಸಚಿವ ಟಿ.ಟಿ ರವಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರೊಂದಿಗೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಲಾಯಿತು.
ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ರಮೇಶ್, ಶಿಡ್ಲಘಟ್ಟ ಶಾಸಕ ಮೇಲೂರು ರವಿ ಮುಂತಾದವರು ಉಪಸ್ಥಿತರಿದ್ದರು.