ಶ್ರೀರಾಮ ನರ್ಸಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಈವ್ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ರಾಮ ನರ್ಸಿಂಗ್ ಕಾಲೇಜ್ ನಲ್ಲಿ
2024 25 ನೇ ಸಾಲಿನ ಸಾಂಸ್ಕೃತಿಕ  ಮತ್ತು ಕ್ರಿಸ್ಮಸ್ ಈವ್ ಉದ್ಘಾಟನಾ  ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ ಹೆಚ್ ಜಿ ವಿಜಯಕುಮಾರ್ ಉದ್ಘಾಟಿಸಿ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚಾಗುತ್ತದೆ ಅದುದರಿಂದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಪಾಲನಜೊಗಿಹಳ್ಳಿ ಚರ್ಚಿನ ಪಾದ್ರಿಗಳಾದಂತಹ ಡೆವಿಡ್ ರವರು ಕ್ರಿಸ್ಮಸ್ ಹಬ್ಬದ ಆಚರಣೆಯ ಮಹತ್ವವನ್ನು ವಿವರಿಸಿದರು ಕ್ರಿಸ್ಮಸ್ ಈವ್ ಹಬ್ಬದ ಆಚರಣೆ ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಸೀಮಿತವಾಗಿಲ್ಲ ಎಲ್ಲಾ ಧರ್ಮದವರು ಇದನ್ನು ಆಚರಣೆ ಮಾಡಬಹುದು ಇದು ಎಲ್ಲಾ ಧರ್ಮದಲ್ಲೂ ಮಾನವಿಯತೆ ಇದೆ ಎಂದು ಹೇಳಿದರು‌.

ಕಾರ್ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ ಸಿ ಮಂಜುನಾಥ್ ಸುಜ್ಞಾನ ದೀಪಿಕಾ ಸಂಸ್ಥೆಯ ಮುಖ್ಯಸ್ಥರಾದ ಮಂಜುನಾಥ್ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement -  - Advertisement - 
Share This Article
error: Content is protected !!
";