ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು.
ಹೆಬ್ಬಾಳದ ಹೊಸ ಮೇಲ್ಸೇತುವೆ ರ‍್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಹೆಬ್ಬಾಳ ಮೇಲ್ಸೇತುವೆಯಲ್ಲಿ ನನ್ನ ಯೆಜ್ಡಿ ರೋಡ್‌ಕಿಂಗ್‌ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಡಿ.ಕೆ ಶಿವಕುಮಾರ್ ಅವರು ಮೆಲುಕು ಹಾಕಿದೆ.
ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

