2,000 ಹೊಸ ಬಸ್‌ಖರೀದಿಸಲು ನಿರ್ಧಾರ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು.

- Advertisement - 

ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";