ಪತ್ರಕರ್ತನಿಗೆ 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಹಿರಿಯ ಪೋಟೋ ಜರ್ನಲಿಸ್ಟ್ ನಾಗರಾಜ್ ಅವರ ಚಿಕಿತ್ಸೆಗಾಗಿ ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

- Advertisement - 

ಹೃದ್ರೋಗದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದ ಅವರಿಗೆ 3 ಲಕ್ಷಕ್ಕೂ ಹೆಚ್ಚು ವೆಚ್ಚವಾಗಿತ್ತು. ಆರ್ಥಿಕ ತೀವ್ರ ಸಂಕಷ್ಟದಲ್ಲಿ ಇದ್ದ ನಾಗರಾಜ್ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ.

- Advertisement - 

ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ. ಸಮಸ್ಯೆಗೆ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ‌, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.

- Advertisement - 

 

Share This Article
error: Content is protected !!
";