ಪ್ರಗತಿಯತ್ತ ಕರ್ನಾಟಕ-ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.20 ರಂದು ಹೊಸಪೇಟೆ ನಗರಕ್ಕೆ ಆಗಮಿಸಲಿದ್ದು, ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement - 

ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್..ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡುವ ಅವರು, 9.50 ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ಗೆ ಆಗಮಿಸುವರು. ಬೆಳಿಗ್ಗೆ 11.15ಕ್ಕೆ ಜಿಂದಾಲ್ ಏರ್ಸ್ಟ್ರಿಪ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು, 11:30ಕ್ಕೆ ಹೊಸಪೇಟೆ ನಗರದ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಲಿಪ್ಯಾಡ್ಗೆ ಬಂದಿಳಿಯುವರು.

- Advertisement - 

ನಂತರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತ ವತಿಯಿಂದ ಜರುಗಲಿರುವ ಪ್ರಗತಿಯತ್ತ ಕರ್ನಾಟಕಸಮರ್ಪಣೆ ಸಂಕಲ್ಪ’, ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಒಂದು ಲಕ್ಷ ಕುಟುಂಬಗಳಿಗೆ ನೆಮ್ಮದಿ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣ ಹೆಲಿಪ್ಯಾಡ್ನಲ್ಲಿ ಹೆಲಿಕ್ಯಾಪ್ಟರ್ ಮೂಲಕ 03:15 ಕ್ಕೆ ಜಿಂದಾಲ್ ಏರ್ಸ್ಟ್ರಿಪ್ ತೋರಣಗಲ್ಲು ತಲುಪಿ 03:20 ಕ್ಕೆ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

- Advertisement - 

Share This Article
error: Content is protected !!
";