ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ: ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

- Advertisement - 

ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

- Advertisement - 

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

 

- Advertisement - 

 

Share This Article
error: Content is protected !!
";