ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಗಿನೆಲೆ ಕನಕಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮಿಯವರ 19ನೇ ವರ್ಷದ ಪುಣ್ಯಾರಾಧನೆ ನಡೆಯಿತು.
ಪುಣ್ಯಾರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಶಾಖಾಮಠ, ಕೇತೋಹಳ್ಳಿ ಬೆಂಗಳೂರಿನ ಭಕ್ತ ಭಂಡಾರದ ಕುಟೀರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.