ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಶಿಕ್ಷಕರು, ಉಪನ್ಯಾಸಕರ ಕೊರತೆ ಇದ್ದರೂ ನೇಮಕಾತಿ ಮಾಡದೇ ಲಕ್ಷಾಂತರ ಮಕ್ಕಳ ಭವಿಷ್ಯದ ಜೊತೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಸರ್ಕಾರಿ ಶಾಲೆ- ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ಮಾಡದೇ 82 ಪರ್ಸೆಂಟ್ ಮಕ್ಕಳಿಗೆ ಅನ್ಯಾಯ ಎಸಗುತ್ತಿದೆ ಎಂದು ಭಂಡ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನಾದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳನ್ನು ತುಂಬುವ ಕೆಲಸವನ್ನು ಶೀಘ್ರವಾಗಿ ಮಾಡಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.