ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ಸಾಧಿಸಿದ್ದು, ಈ ಅಭೂತಪೂರ್ವ ಗೆಲುವಿಗೆ ಕಾರಣೀಭೂತರಾದ ಎಲ್ಲ ನಾಯಕರಿಗೆ ಹಾಗು ಕಾರ್ಯಕರ್ತರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ನಂತರ ಈಗ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ತೋರಿದ್ದು, ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿಯ ಸಕಾರಾತ್ಮಕ ರಾಜಕಾರಣಕ್ಕೆ ಮೊಹರು ಒತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯ ಜನತೆ, ಇಂಡಿ ಮೈತ್ರಿಕೂಟಕ್ಕೆ ಭವಿಷ್ಯವಿಲ್ಲ ಎನ್ನುವುದನ್ನ ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.