ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿರುವ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
 ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುವ ಸಲುವಾಗಿ ಆಡಳಿತಾರೂಢ ಕಾಂಗ್ರೆಸ್ ಬ್ರಿಟಿಷರ ಒಡೆದು ಆಳುವ ನೀತಿ ಅಳವಡಿಸಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಹಿಂದೂಗಳ ಆಸ್ತಿಯನ್ನು ಕಾಂಗ್ರೆಸ್ ಒಡೆಯುತ್ತಿದೆ. ವಕ್ಫ್ ಮಂಡಲಿ ಮೂಲಕ ಕಾಂಗ್ರೆಸ್ ಸಾಮರಸ್ಯ ಕೆಡಿಸುತ್ತಿದೆ. ವಕ್ಫ್ ನೋಟಿಸ್, ಪಹಣಿ ಗೊಂದಲ ನಿವಾರಣೆ ಮಾಡಬೇಕು. ಆಯಾಯ ರೈತರ ಹೆಸರಿಗೆ ಮತ್ತೆ ಪಹಣಿ ಬದಲಾವಣೆ ಆಗಬೇಕು. 1974ರ ವಕ್ಫ್ ಗೆಜೆಟ್ ಅಧಿಸೂಚನೆ ವಾಪಸು ಪಡೆಯಬೇಕು ಎಂದು ಅಶೋಕ್ ಒತ್ತಾಯಿಸಿದರು.

ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಭೂಮಿ, ದೇವಸ್ಥಾನ ಮತ್ತು ಸ್ಮಶಾನ ಭೂಮಿ ಕಬಳಿಸುತ್ತಿದೆ. ಕೇಂದ್ರದ ವಕ್ಫ್ ತಿದ್ದುಪಡಿ ನಿಯಮಾವಳಿಗಳನ್ನು ಕರ್ನಾಟಕ ರಾಜ್ಯ ಸರಳ ಬಹುಮತದಲ್ಲಿ ಪಾಸ್ ಮಾಡಬೇಕು ಎಂದು ಒತ್ತಾಯಿಸಿದರು. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದ್ದು, ಹಿಂದೂ-ಮುಸಲ್ಮಾನರ ನಡುವೆ ಕೋಮು ಸೌಹಾರ್ದತೆ ಸೃಷ್ಟಿಸುತ್ತಿದೆ. ರೈತರ ಪಹಣಿಗಳಲ್ಲಿ ವಕ್ಫ್ ಎಂಬ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಐತಿಹಾಸಿಕ ಹಿಂದೂ ದೇವಾಲಯಗಳು, ಗೋಮಾಳಗಳು, ಶಾಲೆಗಳು ಮತ್ತು ಸಮಾಧಿ ಸ್ಥಳಗಳು ವಕ್ಫ್ ಆಸ್ತಿಯಾಗುತ್ತಿವೆ. ರಾತ್ರೋರಾತ್ರಿ ಪಹಣಿಗಳು ಬದಲಾಗುತ್ತಿವೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಮುನೇಶ್ವರ ನಗರವನ್ನು ಉದಾಹರಣೆಯಾಗಿ ನೀಡಿದ ಅವರು, ಅಲ್ಲಿ ಕುರುಬ ಸಮುದಾಯದ 110 ಕುಟುಂಬಗಳಿವೆ.

60 ವರ್ಷಗಳ ಹಿಂದೆ ಆಗಿನ ಕಾಂಗ್ರೆಸ್ ಸರ್ಕಾರದಿಂದ ಭೂ ದಾಖಲೆಗಳನ್ನು ಪಡೆದಿದ್ದರು. ಆದರೆ ಇಂದು ಅದು ಇದ್ದಕ್ಕಿದ್ದಂತೆ ವಕ್ಫ್ ಭೂಮಿಯಾಗಿ ಮಾರ್ಪಟ್ಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ಅಶೋಕ್ ನಡುವೆ ವಾಕ್ಸಮರ ನಡೆಸಿದರು.

 

- Advertisement -  - Advertisement - 
Share This Article
error: Content is protected !!
";