ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯಲ್ಲಿ ಗಾಂಧಿಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಜಾಗದಲ್ಲಿ ಇದೇ ತಿಂಗಳು 26ರಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅಂದು ಮಹಾತ್ಮಾ ಗಾಂಧಿ ಅವರ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಡಿಸೆಂಬರ್ 27ರಂದು ಬೆಳಗ್ಗೆ 11 ಗಂಟೆಗೆ ಐತಿಹಾಸಿಕ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಸಾಕ್ಷಿಯಾಗಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.