ಇಷ್ಟಲಿಂಗ ಮಹಾಪೂಜೆ ಕೈಗೊಂಡ ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಬಿಜ್ಜಹಳ್ಳಿಯ ಶ್ರೀ ಸಿದ್ದೇಶ್ವರ ಸ್ವಾಮಿ ಬೆಟ್ಟ ಬಹಳ ಇತಿಹಾಸ ಪ್ರಸಿದ್ಧ ಧಾರ್ಮಿಕ ಸ್ಥಳ. ಭಾನುವಾರ ಇಲ್ಲಿಗೆ ಭೇಟಿ ನೀಡಿ, ಇಷ್ಟಲಿಂಗ ಮಹಾಪೂಜೆ ಕೈಗೊಂಡು ನಾಡಿನ ಒಳಿತಿಗೆ ಪ್ರಾರ್ಥಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

- Advertisement - 

ಈ ಬೆಟ್ಟಕ್ಕೆ ಹೊಸ ರೂಪ ನೀಡಲು ಕಾಲ ಕಾಲಕ್ಕೆ ಮಾರ್ಗದರ್ಶನಗಳನ್ನು ನೀಡುತ್ತಾ, ಕಾರ್ಯಕ್ರಮಗಳ ದಿವ್ಯ ಸಾನಿಧ್ಯ ವಹಿಸಿದ್ದ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಜಗದ್ಗುರು ಶ್ರೀ ರೇಣುಕಾ ಪ್ರಸನ್ನ ವೀರ ಸೋಮೇಶ್ವರ ರಾಜದೇಶೀಕೇಂದ್ರ ಸ್ವಾಮೀಜಿಗಳಿಂದ ಶಿವಕುಮಾರ್ ಅಶೀರ್ವಾದ ಪಡೆದರು.

- Advertisement - 

ನಾನು ರಾಜ್ಯಕ್ಕೆ ಉಪಮುಖ್ಯಮಂತ್ರಿಯಾಗಿದ್ದರೂ, ಈ ಕ್ಷೇತ್ರಕ್ಕೆ ಶಾಸಕ; ಈ ಭಾಗಕ್ಕೆ ಮನೆ ಮಗ. ಭಕ್ತಿ ಇದ್ದಲ್ಲಿ ಭಗವಂತ ಇರುತ್ತಾನೆ. ಹೀಗಾಗಿ ಈ ಭಾಗದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ನನ್ನ ಭಾಗ್ಯ ಎಂದು ಡಿ.ಕೆ.ಶಿವಕುಮಾರ್ ಭಾವುಕರಾದರು.

 

- Advertisement - 

 

Share This Article
error: Content is protected !!
";