ರಕ್ಷಣಾ ಸಚಿವರ ಭೇಟಿ : ಹೆಚ್.ಎ.ಎಲ್.ಕಾರ್ಖಾನೆ ಕುರಿತು ಚರ್ಚೆ
ಚಂದ್ರವಳ್ಳಿ ನ್ಯೂಸ್, ತುಮಕೂರು
ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ,
ತುಮಕೂರು ಲೋಕಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಗುಬ್ಬಿ ಹೆಚ್.ಎ.ಎಲ್. ಕಾರ್ಖಾನೆಯ ಬಗ್ಗೆ ಚರ್ಚಿಸಿದರು.
ತುಮಕೂರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜನಾಥ ಸಿಂಗ್ ಅವರಿಗೆ ಸಚಿವ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.