ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಮಿಷನ್ ಆಸೆಗೆ ಸ್ವಾಭಿಮಾನ ಮಾರಿಕೊಂಡ ಡಿ.ಕೆ ಶಿವಕುಮಾರ್! ಡೂಪ್ಲಿಕೇಟ್ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.
ಚುನಾವಣೆಗೂ ಮುಂಚೆ #SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆಶಿ, ಕಮಿಷನ್ ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ.
ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗೆ ಅವಕಾಶ ನೀಡಲಾಗಿದೆ ಎಂದು ಜೆಡಿಎಸ್ ದೂರಿದೆ.
ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡ ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಂದಿನಿಯನ್ನು ಮರೆತು, ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿದೆ ಎಂದು ಜೆಡಿಎಸ್ ದೂರಿದೆ.
ನಂದಿನಿ ಹಾಲಿನ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಮಾರುಕಟ್ಟೆ ಸೃಷ್ಟಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಕನ್ನಡಿಗರ ಹೆಮ್ಮೆಯ ಬ್ರಾಂಡ್ “ನಂದಿನಿ”ಯ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.