ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಡಿ ಗೋವುಗಳ ಮೇಲೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದು ಬಿಜೆಪಿ ತಿಳಿಸಿದೆ.
ಇಂದು ಫ್ರೀಡಂ ಪಾರ್ಕ್‌ನಲ್ಲಿ ರೈತ ಮೋರ್ಚಾ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ. ವೆಂಕಟೇಶ್ ಅವರ ಭಾವಚಿತ್ರಕ್ಕೆ ಸಗಣಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿ, ಹೀನ ಕೃತ್ಯ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ಬಳ್ಳಾರಿ, ತುಮಕೂರು, ಬಾಗಲಕೋಟೆ, ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರೈತ ಮೋರ್ಚಾ ವತಿಯಿಂದ ಸಚಿವ ಕೆ. ವೆಂಕಟೇಶ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಪ್ರತಿಭಟಿಸಲಾಯಿತು.
ಮುದ್ದೇಬಿಹಾಳದಲ್ಲಿ ಗೋಮಾತೆಯ ಮೇಲೆ ಕೌರ್ಯ ಮೆರೆದದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿರುವುದನ್ನು ವಿರೋಧಿಸಿ, ಮುದ್ದೇಬಿಹಾಳದ ಪೊಲೀಸ್ ಠಾಣೆ ಮುಂಭಾಗ ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಎ. ಎಸ್. ಪಾಟೀಲ್ ನಡಹಳ್ಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ಬಿಜೆಪಿ ತಿಳಿಸಿದೆ.