ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಡಿ, ಐಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮೈಸೂರಿನ ಕೆ.ಆರ್. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,
ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ,
ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು.
ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.