ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಒಳ ಮೀಸಲಾತಿ ಹಕ್ಕೊತ್ತಾಯ ಕುರಿತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅಹವಾಲನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗದ ಪರಮಪೂಜ್ಯ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ಸಮುದಾಯದ ಪೂಜ್ಯ ಸ್ವಾಮೀಜಿಗಳು, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದರಾದ ಗೋವಿಂದ ಎಂ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಆರ್.ವಿಶ್ವನಾಥ್, ಬಿ.ಮತ್ತಿಮಾಡು ಅವರು ಸೇರಿದಂತೆ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.