ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದರು.
ಈಗ ಸಚಿವ ಸತೀಶ್ ಜಾರಕಿಹೊಳಿ ಪುತ್ರ, ಸಂಸದೆ ಪ್ರಿಯಾಂಕಾ ಸಹೋದರ ರಾಜಕೀಯ ಅಖಾಡದಲ್ಲಿ ಗೆಲ್ಲಿಸಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ರಾಹುಲ್‌ಜಾರಕಿಹೊಳಿ ಪ್ರಧಾನ ಕಾರ್ಯದರ್ಶಿ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ.
ರಾಹುಲ್‌ಜಾರಕಿಹೊಳಿ ಆಯ್ಕೆಯಾಗುತ್ತಿದ್ದಂತೆ ಬೆಳಗಾವಿ ಮತ್ತು ಗೋಕಾಕಿನಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿಪರ ಘೋಷಣೆ ಕೂಗಿ ಸಂಭ್ರಮಿಸಿದರು.