ಕೊಪ್ಪಳ ವಿವಿದ್ಯಾಯಲ್ಲಿ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಸಾಲಿನ ಎಂ.. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜ ಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಉಳಿದಿರುವ ಸೀಟುಗಳ ಪ್ರವೇಶಾತಿಯನ್ನು ಯುಯುಸಿಎಂಎಸ್ https://uucms.karnataka.gov.in/ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿ ಜೊತೆಗೆ ಸಂಬಂಧಪಟ್ಟ ದಾಖಲಾತಿಗಳ ನಕಲು ಪ್ರತಿಯನ್ನು ದೃಢೀಕರಿಸಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು.

ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article
error: Content is protected !!
";