ಕೃಷಿ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪೆÇ್ಲಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪೆÇ್ಲೀಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಜೂನ್ 6 ರವರೆಗೆ ನಿಗಧಿಪಡಿಸಲಾಗಿತ್ತು. ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಅರ್ಜಿ ಸಲ್ಲಿಸುವ ಅವಧಿಯ ಅಂತಿಮ ದಿನಾಂಕವನ್ನು ಜೂನ್ 27 ರ ವರೆಗೆ ವಿಸ್ತರಿಸಲಾಗಿದೆ.

- Advertisement - 

ಅರ್ಜಿಯನ್ನು ವೆಬ್ ಸೈಟ್ www.uahs.edu.in ನಿಂದ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27 ರ ಒಳಗೆ ಸಲ್ಲಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% ಕನಿಷ್ಠ ಶೇ.40% .ಜಾ. ಮತ್ತು .ಪಂ./ಪ್ರವರ್ಗ1 ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

- Advertisement - 

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್ ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಿಪ್ಲೋಲಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ 576213, ಉಡುಪಿಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ  9108241342, 9686405090, 9901355032 ಅಥವಾ ಇಮೇಲ್ princi-brahmavar @uahs.edu.in ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";