ಪ್ರಧಾನಿ ಮೋದಿ ಅವರನ್ನು ನೋಡಿಲು ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ
ಹಳದಿ ಮೆಟ್ರೋ ಮಾರ್ಗ, ಮೂರು ವಂದೇ ಭಾರತ್ ರೈಲು ಮತ್ತು ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ನೆಚ್ಚಿನ ಪ್ರಧಾನಿ ಮೋದಿ ಅವರನ್ನು ಕಣ್ಣಾರೆ ನೋಡಿ ಮನತುಂಬಿಕೊಳ್ಳಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು.

ಪ್ರಧಾನಿ ಮೋದಿ ಆಗಮನ ಹಿನ್ನಲೆಯಲ್ಲಿ ಕೆಲ ಬೀದಿಗಳು ಕೇಸರಿ ಮಯವಾಗಿದ್ದವು. ಸಂಗೊಳ್ಳಿರಾಯಣ್ಣ ಸರ್ಕಲ್ ಬಳಿ ಕಟೌಟ್ ಹಾಕಿ ಕಾರ್ಯಕರ್ತರು ಸ್ವಾಗತ ಕೋರಿದ್ದರು. ಹೆಜ್ಜೆ ಹೆಜ್ಜೆಗೂ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.
ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಅವರನ್ನು ಬಿಜೆಪಿ ವಿಪಕ್ಷ ನಾಯಕ ಆರ್​​​ ಅಶೋಕ್​
, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಸ್ವಾಗತಿಸಿದರು.

- Advertisement - 

ಪ್ರಧಾನಿ ಮೋದಿ ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಕ್ಕಳು ಮಹಿಳೆಯರು ಸೇರಿದಂತೆ ಅಭಿಮಾನಿಗಳು ಮೋದಿ ಕಟೌಟ್ ಹಿಡಿದು ಬಂದಿದ್ದ ಸಾರ್ವಜನಿಕರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಕಾತುರದಿಂದ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತಿದ್ದ ಜನಸಾಗರ.


ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆಯಲ್ಲಿ ಸಾಗುತ್ತಿದ್ದಂತೆ ಅಭಿಮಾನಿಗಳು ಜಯಘೋಷಗಳೊಂದಿಗೆ ಸ್ವಾಗತ ಕೋರಿದರು.

- Advertisement - 

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಮೂರು ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. ಬಳಿಕ ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ಮೋದಿ ಲೋಕಾರ್ಪಣೆಗೊಳಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಶೋಭಾ ಕರದ್ಲಾಂಜೆ, ಅಶ್ವಿನ್, ವಿ.ಸೋಮಣ್ಣ ಮತ್ತಿತರ ಸಚಿವರು ಸಾಥ್​ ನೀಡಿದರು. ​

ಆರ್​​.ವಿ. ರೋಡ್​ನಿಂದ ಬೊಮ್ಮಸಂದ್ರವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅಕ್ಕಪಕ್ಕ ಕುಳಿತು ಸಂಚಾರ ಮಾಡಿದರು.

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪಂಚಮುಖಿ ಗಣೇಶ ಮೂರ್ತಿ ನೀಡಿದರು.

 

 

 

Share This Article
error: Content is protected !!
";