ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ಹೊಸ ವರ್ಷದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್ ರವರು 5000 ಕ್ಯಾಲೆಂಡರ್ ಗಳನ್ನು ದೇವಾಲಯದ ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ ಸಮ್ಮುಖದಲ್ಲಿ ಉಚಿತವಾಗಿ ವಿತರಣೆ ಮಾಡಿದರು.
ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾದಿಗಳಿಗೆ 10,000 ಕುಡಿಯುವ ನೀರಿನ ಪ್ಯಾಕೆಟ್ಟುಗಳನ್ನು ಹಂಚಲಾಗುತ್ತದೆ ಎಂದು ಪ್ರತಾಪ್ ಅವರು ತಿಳಿಸಿದ್ದಾರೆ. ಬಿಜೆಪಿ ಮುಖಂಡರಾದ ಪುಟ್ಟರಾಜು, ಶರತ್, ಬಾಲೆನಹಳ್ಳಿ ಸುಬ್ರಮಣ್ಯ, ಗಂಗರಾಜು ಹಾಜರಿದ್ದರು.