ಜಿಪಂ, ತಾಪಂ ಚುನಾವಣೆ ಯಾವಾಗ, ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಮಾನ್ಯತೆ ನೀಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಗ್ರಾಮೀಣ ಪ್ರಾಂತ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತ ಸ್ಥಳೀಯ ಸಂಸ್ಥೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ. ಸುಮಾರು
4 ವರ್ಷಗಳಿಂದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಕ್ಕೆ ಮಾನ್ಯತೆ ಇಲ್ಲದಂತಾಗಿದೆ.

 ಈ ಅವ್ಯವಸ್ಥೆಯ ಫಲದಿಂದ ಗ್ರಾಮೀಣ ಪ್ರಾಂತ್ಯದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಈ ವಿಚಾರದಲ್ಲಿ ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ.

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂಬ ಪ್ರಶ್ನೆ ಮಾರ್ಮಿಕ ಉತ್ತರವಾಗಿದೆ. ಮಾಜಿ ಪ್ರಧಾನಿ  ದಿವಂಗತ ಶ್ರೀ ರಾಜೀವ್ ಗಾಂಧಿ ಅವರ ಆಡಳಿತದ ಜ್ಞಾನದಲ್ಲಿ ಮುನ್ನೆಲೆಗೆ ಬಂದಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಕ್ಕೆ ಮಾನ್ಯತೆ ನೀಡದಿರುವುದು ವಿಪರ್ಯಾಸವಾಗಿದೆ.

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತ ಸೇರಿದಂತೆ ಬೆಂಗಳೂರಿನ ಬಿಬಿಎಂಪಿ ಆಡಳಿತ ಇಲ್ಲದಿರುವ ಕಾರಣಕ್ಕೆ ಕೇಂದ್ರ ಸರ್ಕಾರವು 19 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ತಡೆಹಿಡಿಯಲಾಗಿದೆ ಹಾಗೂ ಚುನಾವಣೆ ಆಯೋಗ ರಾಜ್ಯಸರ್ಕಾರಕ್ಕೆ ತರಾಟೆ ತೆಗೆದುಕೊಂಡಿರುವ ವಿಚಾರ ಸುದ್ದಿಮಾದ್ಯಮಗಳಲಿ ಸುದ್ದಿ ಮಾಡುತ್ತಿವೆ.

ಸ್ಥಳೀಯ ಸಂಸ್ಥೆಗಳ ಆಡಳಿತದಿಂದ ಮಾತ್ರವೇ ಜನಸಾಮಾನ್ಯರಿಗೆ ಮೂಲಭೂತ ವ್ಯವಸ್ಥೆಗಳನ್ನು ಮುಟ್ಟಿಸಲು ಸಾದ್ಯವಿದೆ. ಸ್ಥಳೀಯ ಜನಪ್ರತಿನಿಧಿಗಳನ್ನು ಬೆಂಬಲಿಸುವ ಮೂಲಕ ಅನುದಾನದ ಸುಸಜ್ಜಿತ ವ್ಯವಸ್ಥೆಯನ್ನು ಜನಪರವಾಗಿ ಬಳಸಿಕೊಳ್ಳಬೇಕು. ಮಹಾತ್ಮ ಗಾಂಧಿ ಅವರು ಕನಸ್ಸು ಕಂಡಂತೆ ಗ್ರಾಮೀಣ ಪ್ರದೇಶಗಳ ಪಂಚಾಯತ್ ವ್ಯವಸ್ಥೆಯನ್ನು ಸುಸಜ್ಜಿತವಾಗಿ ಕಾಪಾಡಬೇಕು.
ಕಿರು ಲೇಖನ-ರಘು ಗೌಡ 9916101265

 

Share This Article
error: Content is protected !!
";