ರೈತ ಮಕ್ಕಳಿಗೆ ಗುಡ್ ನ್ಯೂಸ್, ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26
ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ರೈತರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ 15 ವಿದ್ಯಾರ್ಥಿಗಳ ಸೇರ್ಪಡೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಆಸಕ್ತರು ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-230895, ಮೊಬೈಲ್ ಸಂಖ್ಯೆ 9980991048 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

- Advertisement - 

 

Share This Article
error: Content is protected !!
";