ಕ್ಯಾನ್ಸರ್ ಮಾರಕ ರೋಗವನ್ನು ಬುಡಸಮೇತ ಕಿತ್ತೆಸೆಯಲು ದಿಟ್ಟ ಹೆಜ್ಜೆ ಇಟ್ಟ ಸರ್ಕಾರ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ʼಕ್ಯಾನ್ಸರ್‌ʼ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಇಂತಹ ಮಾರಕ ರೋಗವನ್ನು ಬುಡಸಮೇತ ಕಿತ್ತೆಸೆಯಲು ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್‌ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಇದರಿಂದ ಕ್ಯಾನ್ಸರ್‌ಚಿಕಿತ್ಸೆಯಿಂದ ವಂಚಿತರಾಗುವವರ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ. ಅಲ್ಲದೇ ಬಿಪಿಎಲ್‌ಕಾರ್ಡ್‌ಹೊಂದಿರುವ ಕ್ಯಾನ್ಸರ್‌ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗಲಿದೆ.

- Advertisement - 

ನೀವಿನ್ನು ನಿಶ್ಚಿಂತರಾಗಿರಿ, ನಿಮ್ಮ ಆರೋಗ್ಯದ ಕಾಳಜಿಯನ್ನು ನಾವು ವಹಿಸಿಕೊಂಡಿದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";