ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನುಡಿದಂತೆ ನಡೆಯುವ ನಮ್ಮ ಸರ್ಕಾರ, ರಾಜ್ಯದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಮುಂಬರುವ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತಪತ್ರ (ಬ್ಯಾಲೆಟ್)ಮೂಲಕವೇ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಮೆಟ್ರೋ ಎಲಿವೇಟೆಡ್ ಕಾರಿಡಾರ್‌ಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದ್ದು, 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ ಮೆಡಿಕಲ್‌ಕಾಲೇಜು ಸ್ಥಾಪನೆಗೆ ನಿರ್ಧಾರ.
ಅಂಧತ್ವ ನಿವಾರಣೆ ಹಾಗೂ ಕಣ್ಣಿನ ಆರೈಕೆಗಾಗಿ ‘ಆಶಾಕಿರಣ ಯೋಜನೆ‘ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

