ಬೆಂಗಳೂರಲ್ಲಿ ಮಹಿಳೆಗೆ ಭಯಾನಕ ಹತ್ಯೆ!

khushihost

ರಾಜಧಾನಿ ಬೆಂಗಳೂರಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಗಂಡನೇ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. 25 ವರ್ಷದ ನವ್ಯಾ ಕೊಲೆಯಾದ ಮಹಿಳೆ. ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ನವ್ಯಾ ಗಂಡ ಕಿರಣ್ ಈ ಕೃತ್ಯ ಎಸಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಳೆದ 3 ವರ್ಷದ ಹಿಂದೆ ನವ್ಯಾ ಹಾಗೂ ಕಿರಣ್ ಇಬ್ಬರು ಪ್ರೀತಿಸಿ ಮದುವೆ ಆಗಿದ್ದರು. ನವ್ಯಾ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದವರಾಗಿದ್ದು, ಸಿನಿಮಾ ರಂಗದಲ್ಲಿ ಕೊರಿಯೋಗ್ರಾಫರ್ ಆಗಿದ್ದರು.

- Advertisement - 

- Advertisement - 
ಕೊಲೆಗೆ ಕಾರಣವೇನು?
ಪತಿ‌ ಕಿರಣ್ ಪತ್ನಿಯ ಮೇಲೆ ಅನುಮಾನಗೊಂಡು ಗಲಾಟೆ ಮಾಡುತ್ತಿದ್ದ. ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ ಎನ್ನಲಾಗಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article
error: Content is protected !!
";