ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ ನಾಯಕ್‌ಅವರು, ಇಂದು ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳನ್ನು ಅನಾವರಣಗೊಳಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಲವು ನೀರಾವರಿ ಯೋಜನೆಗಳನ್ನು ತಂದು ರೈತರ ಹಿತ ಕಾಯುವ ಕೆಲಸಗಳನ್ನು ಮಾಡಿದ್ದಾರೆ.
ಪ್ರಸ್ತುತ ಆರೋಗ್ಯ, ವೈದ್ಯಕೀಯ, ಸಂಚಾರ ಸೌಲಭ್ಯ ಸೇರಿ ಇನ್ನಿತರ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.