ವಿದ್ಯಾರ್ಥಿ ವೇತನಕ್ಕಾಗಿ ಎನ್‍ಎಸ್‍ಪಿ ಪೋರ್ಟಲ್‍ನಲ್ಲಿ ಓಟಿಆರ್ ಸಂಖ್ಯೆ ಸೃಜಿಸಲು ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೆಟ್ರಿಕ್ ಪೂರ್ವ (9 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎನ್.ಎಸ್.ಪಿ ಫೋರ್ಟಲ್ನಲ್ಲಿ .ಟಿ.ಆರ್ ಸಂಖ್ಯೆಯನ್ನು ಸೃಜಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

- Advertisement - 

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತದೆ. ಸಂಬಂಧ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಭಾರತ ಸರ್ಕಾರದ Ministry of electronics and Information Technology National Scholorship portał  ನಲ್ಲಿ One Time Registration  ಸಂಖ್ಯೆಯನ್ನು ರಚನೆ ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

- Advertisement - 

ಮೆಟ್ರಿಕ್ ಪೂರ್ವ (9ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ಅವರು ಅಭವೃದ್ಧಿಪಡಿಸಿರುವ  National Scholorship portal (Web site link: https://scholarships.gov.in)   ನಲ್ಲಿ One Time Registration  ಸಂಖ್ಯೆಯನ್ನು ಸೃಜಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್ (ಪೂರ್ವ) ಗಣಪತಿ ದೇವಸ್ಥಾನ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";