ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶಾತಿ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

- Advertisement - 

ಸಂಬಂಧಪಟ್ಟ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖಾ ಆನ್‍ಲೈನ್ ವೆಬ್‍ಸೈಟ್‍ನಲ್ಲಿ www.sw.kar.nic.in ರಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಹಾಗೂ ಇತರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕರ ಕಛೇರಿ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್ ಅವರನ್ನು ಸಂಪರ್ಕಿಸಬಹುದಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು: ವಿದ್ಯಾರ್ಥಿ ಎಸ್‍ಎಟಿಎಸ್ ನಂಬರ್‍ನ ಜೆರಾಕ್ಸ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಆಧಾರ್ ಕಾರ್ಡ್, ಹಿಂದಿನ ತರಗತಿಯಲ್ಲಿ ಪಾಸ್‍ಆದ ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳು ಸೇರಿದಂತೆ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಎನ್‍ಪಿಸಿಐನಲ್ಲಿ ಆಧಾರ್ ಜೋಡಣೆ ಮಾಡಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.

- Advertisement - 

ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು : ವಿದ್ಯಾಥಿಯ ಕಾಲೇಜು ದಾಖಲಾತಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಆಧಾರ್ ಕಾರ್ಡ್,  ಹಿಂದಿನ ತರಗತಿಯಲ್ಲಿ ಪಾಸ್ ಆದ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಸೇರಿದಂತೆ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಎನ್‍ಪಿಸಿಐನಲ್ಲಿ ಆಧಾರ್ ಜೋಡಣೆ ಮಾಡಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಯ ದೂರದ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿಯ ಎಸ್‍ಎಸ್‍ಪಿ ವಿವರ ಹಾಗೂ ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share This Article
error: Content is protected !!
";