ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-174 ರಲ್ಲಿ ಐ.ಐ.ಎಸ್.ಸಿ, ಐಐಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವವರು ಬಿ.ಇ./ಬಿ.ಟೆಕ್ ಪದವಿ ಪಡೆದಿರಬೇಕು. ಬಿ.ಇ./ಬಿ.ಟೆಕ್ ಕೋರ್ಸುಗಳಲ್ಲಿ ಕನಿಷ್ಠ ಶೇ. 55 ರಷ್ಟು ಅಂಕಗಳಿಸಿರಬೇಕು. ಅಭ್ಯರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
ಇಂಜಿನಿಯರಿಂಗ್ ಪಧವೀಧರರಿಗೆ ಗರಿಷ್ಠ ಎರಡು ವಾರದ ಅವಧಿಯ ಶಿಷ್ಯ ವೇತನ ಸಹಿತ ತರಬೇತಿ ನೀಡಲಾಗುವುದು. ಈ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ರೂ. 15,000/-ಗಳ ಶಿಷ್ಯವೇತನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನಾಂಕವಾಗಿದೆ. ಆಸಕ್ತರು ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಆನೇಕಲ್ ತಾಲ್ಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.